Latest

ನಾಳೆ ಬಿಜೆಪಿ ಮಹತ್ವದ ಕೋರ್ ಕಮಿಟಿ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಅದೇ ಸಭೆಯಲ್ಲಿ ವಿಧಾನ ಪರಿಷತ್ ಹಾಗೂ ರಾಜ್ಯ ಸಭೆಗೆ ನಡೆಯಲಿರುವ ಚುನಾವಣೆ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ನಿನ್ನೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ ಕುಮಾರ ಕಟೀಲ್ ಅವರವ ಜತೆ ಬೇರೆ ವಿಚಾರ ಚರ್ಚೆ ಆಗಿದೆ. ಕೋರ್ ಕಮೀಟಿ ಸಭೆಯಲ್ಲಿ ಈ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದರು.

ಹಿಂದುಳಿದ ವರ್ಗಗಳ ಮೀಸಲಾತಿಗೆ ಸಂಬಂಧಿಸಿದಂತೆ ಬಿಬಿಎಂಪಿ ಪ್ರಕರಣ ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿ ಇದೆ. ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಬಗ್ಗೆ ಕಾನೂನಾತ್ಮಕವಾಗಿ ಹಾಗೂ ಸಂವಿಧಾನಾತ್ಮಕವಾಗಿ ಒಬಿಸಿ ಮೀಸಲಾತಿ ಮಾಡಲೇಬೇಕಿದೆ. ಅದಕ್ಕೆ ಈಗಾಗಲೇ ರಚಿಸಲಾಗಿರುವ ಸಮಿತಿ ತನ್ನ ವರದಿ ಸಲ್ಲಿಸಲು ಸಮಯಾವಕಾಶ ನೀಡುವಂತೆ ಅಥವಾ ಹಳೆಯ ಮೀಸಲಾತಿ ಪ್ರಕಾರ ಚುನಾವಣೆ ಮಾಡಲು ಅವಕಾಶ ನೀಡುವಂತೆ ಕೋರಲಾಗಿದೆ. ಇದಕ್ಕೆ ಬಹುತೇಕ ಅವಕಾಶ ಸಿಗುವ ಭರವಸೆ ಇದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
SSLC ಪರೀಕ್ಷಾ ಫಲಿತಾಂಶ: ದಿನಾಂಕ ಪ್ರಕಟ

Home add -Advt

Related Articles

Back to top button