ಪ್ರಗತಿವಾಹಿನಿ ಸುದ್ದಿ; ಬೆಂಗಳೂರು; ಇಂದಿನಿಂದ ಮೂರು ದಿನಗಳ ಕಾಲ ವೃತ್ತಿಪರ ಕೋರ್ಸ್ ಗಳಿಗೆ ಸಿಇಟಿ ಪರೀಕ್ಷೆ ಆರಂಭವಾಗುತ್ತಿದೆ. ನೀಟ್ ಮಾದರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.
ಹಿಜಾಬ್ ಧರಿಸಿ ಬರುವವರಿಗೆ ಸಿಇಟಿ ಪರೀಕ್ಷೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಇತ್ತೀಚೆಗೆ ಪಿಎಸ್ ಐ ಹಾಗೂ ಸಹಾಯಕ ಪ್ರಾಧ್ಯಾಪಕ ಪರೀಕ್ಷೆಗಳ ಅಕ್ರಮದಿಂದ ಎಚ್ಚೆತ್ತ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಫುಲ್ ಅಲರ್ಟ್ ಆಗಿದೆ. ಈ ಹಿನ್ನೆಲೆಯಲ್ಲಿ ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿದೆ.
ಒಟ್ಟು 2,16,525 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ