ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿಗದಿಯಂತೆ ಜುಲೈ 30 ಮತ್ತು 31ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಇದರಲ್ಲಿ ಯಾವುದೇ ಬದಲಾವಣೆಯೂ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಟ್ಟು 127 ಸ್ಥಳಗಳ 497 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ಈಗಾಗಲೇ ಎಸ್‌ಒಪಿ ತಂಡಗಳನ್ನ ರಚಿಸಲಾಗಿದೆ. ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್ ಸೇರಿದಂತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು. ಎರಡು ದಿನಗಳ ಮುಂಚೆಯೇ ಕೇಂದ್ರಗಳನ್ನ ಸ್ಯಾನಿಟೈಸ್ ಮಾಡಲಾಗುತ್ತದೆ.
ಹೊರ ರಾಜ್ಯದಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಕ್ವಾರಂಟೈನ್ ನಿಯಮದಿಂದ ವಿನಾಯಿತಿ ನೀಡಲಾಗಿದೆ. ಕೊರೊನಾ ಪಾಸಿಟೀವ್ ಇರುವ ವಿದ್ಯಾರ್ಥಿಗಳಿಗೂ ಪರೀಕ್ಷೆಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸಂಸ್ಥೆಗಳು ಸಹಕಾರ ನೀಡುತ್ತವೆ. ಎಲ್ಲಾ ಮಾರ್ಗಗಳಲ್ಲೂ ಬಸ್ ವ್ಯವಸ್ಥೆ ಮಾಡಲಾಗುತಿದೆ ಎಂದು ಹೇಳಿದರು.
ಪಿಜಿ ಸಿಇಟಿ , ಡಿಪ್ಲೊಮಾ ಸಿಇಟಿ ಮುಂದೂಡಿಕೆ ಮಾಡಲಾಗಿದೆ.ಆಗಸ್ಟ್ 8, 9 ರಂದು ನಿಗದಿಯಾಗಿದ್ದ ಸಿಇಟಿ ಮುಂದೂಡಿಕೆ ಮಾಡಲಾಗಿದೆ ಎಂದು ವಿವರಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ