Film & EntertainmentPolitics

*ಬಿಗ್ ಬಾಸ್ ಮನೆಯಿಂದ ಚೈತ್ರಾ ಕುಂದಾಪುರ ಔಟ್*

ಪ್ರಗತಿವಾಹಿನಿ ಸುದ್ದಿ: ಬಿಗ್ ಬಾಸ್ ಸೀಸನ್ 11ರಿಂದ ಚೈತ್ರ ಕುಂದಾಪುರ ಔಟ್ ಆಗಿದ್ದಾರೆ. ಈ ವಾರ ದೊಡ್ಡಮನೆಯಿಂದ ಯಾರಿಗೆ ಗೇಟ್ ಪಾಸ್‌ ಸಿಗಬಹುದು ಎಂಬ ಸಹಜ ಕುತೂಹಲ ಎಲ್ಲರಲ್ಲೂ ಇತ್ತು. ಆ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

ಹಿಂದುತ್ವದ ಫೈರ್‌ಬ್ರಾಂಡ್ ಚೈತ್ರ ಕುಂದಾಪುರ ಬಿಗ್ ಬಾಸ್ ಮನೆ ಪ್ರವೇಶ ಎಲ್ಲರಲ್ಲೂ ಅಚ್ಚರಿ ಮೂಡಿಸಿತ್ತು. ದೊಡ್ಡಮನೆಯಲ್ಲಿ ನಡೆಯುವ ಎಲ್ಲ ಟಾಸ್ಕ್‌ಗಳಲ್ಲಿ ಅವರು ಸಕ್ರಿಯರಾಗಿ ಪಾಲ್ಗೊಳ್ಳುತ್ತಿದ್ದರು. ಎಲ್ಲ ಸ್ಪರ್ಧಿಗಳೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.

ಈ ವಾರ ಮನೆಯಿಂದ ಹೊರಹೋಗುವವರ ಲಿಸ್ಟ್‌ಗೆ ಐವರು ನಾಮಿನೇಟ್ ಆಗಿದ್ದರು. ಅದರಲ್ಲಿ ಚೈತ್ರಾ ಕುಂದಾಪುರ ಅಂತಿಮವಾಗಿ ಹೊರನಡೆದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button