Kannada NewsKarnataka NewsLatest
*ಅಜ್ಞಾತ ಸ್ಥಳದಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಅಭಿನವ ಹಾಲಶ್ರೀ ಸ್ವಾಮೀಜಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯಮಿಯೊಬ್ಬರಿಗೆ ಟಿಕೆಟ್ ಕೊಡಿಸುವುದಾಗಿ ಹೇಳಿ 5 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಎ3 ಆರೋಪಿಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿ ತಲೆಮರೆಸಿಕೊಂಡಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬಂಧನವಾಗುತ್ತಿದ್ದಂತೆ ನಾಪತ್ತೆಯಾಗಿರುವ ಅಭಿನವ ಹಾಲಶ್ರೀ ಸ್ವಾಮೀಜಿಗೆ ಬಂಧನ ಭೀತಿ ಶುರುವಾಗಿದೆ. ಇದೀಗ ಅಜ್ಞಾತ ಸ್ಥಳದಿಂದಲೇ ಕೋರ್ಟ್ ಗೆ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಅಭಿನವ ಹಾಲಶ್ರೀ ಪರ ವಕೀಲರು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ನಾಳೆ ಸೆ.16ರಂದು ಅರ್ಜಿ ವಿಚಾರಣೆ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ