ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶ ನೀಡಿದೆ.
ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಎಲ್ಲಾ ಆರೋಪಿಗಳನ್ನು ಬೆಂಗಳುರು 3ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಅಕ್ಟೋಬರ್ 6ವರೆಗೆ ಚೈತ್ರಾ ಕುಂದಾಪುರ ಸೇರಿದಂತೆ 7 ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ನೀಡಿದೆ.
ಉದ್ಯಮಿ ಗೋವಿಂದ ಬಾಬು ಎಂಬುವವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಚೈತ್ರಾ ಕುಂದಾಪುರ ಹಾಗೂ ಗ್ಯಾಂಗ್ ಬರೋಬ್ಬರಿ 5 ಕೋಟಿ ವಂಚನೆ ಮಾಡಿರುವುದಾಗಿ ಉದ್ಯಮಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ, ಅಭಿನವ ಹಾಲಶ್ರೀ ಸ್ವಾಮೀಜಿ ಸೇರಿದಂತೆ 7 ಆರೋಪಿಗಳನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ