
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ 5ಕೋಟಿ ರೂಪಾಯಿ ವಂಚಿಸಿದ್ದ ಚೈತ್ರಾ ಕುಂದಾಪುರ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೋರ್ವ ಆರೋಪಿಯನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಚೆನ್ನ ನಾಯಕ್ ಬಂಧಿತ ಆರೋಪಿ. ಬೆಂಗಳೂರಿನ ಯಶವಂತಪುರ ಬಳಿ ಸಿಸಿಬಿ ಪೊಲೀಸರು ಆರೋಪಿ ಚೆನ್ನ ನಾಯಕ್ ನನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿ ಚೆನ್ನ ನಾಯಕ್, ತಾನು ಬಿಜೆಪಿ ಕೇಂದ್ರ ಚುನವಣಾ ಸಮಿತಿ ಸದಸ್ಯ ಎಂದು ಉದ್ಯಮಿ ಬಳಿ ನಟಿಸಿದ್ದ. ಸಧ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ