ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರನದಲ್ಲಿ ಬಂಧನಕ್ಕೀಡಾಗಿದ್ದ ಹಿಂದೂ ಹೋರಾಟಗಾರ್ತಿ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಳೆದ ಮೂರು ದಿನಗಳಿಂದ ಅನಾರೋಗ್ಯ ಕಾರಣಕ್ಕೆ ಚೈತ್ರಾ ಕುಂದಾಪುರ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಹಿಳಾ ಸಾಂತ್ವನ ಕೇಂದ್ರದಲ್ಲಿದ್ದ ಚೈತ್ರಾ ಕುಂದಾಪುರಾ ಸಿಸಿಬಿ ವಿಚಾರಣೆಗೂ ಮುನ್ನ ಕುಸಿದು ಬಿದ್ದು ಬಾಯಿಯಲ್ಲಿ ನೊರೆ ಕಾಣಿಸಿಕೊಂಡಿತ್ತು. ಅನಾರೋಗ್ಯ ಕಾರಣಕ್ಕೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದೀಗ ಚೈತ್ರಾ ಕುಂದಾಪುರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಡಿಸ್ಚಾರ್ಜ್ ಆಗುತ್ತಿದ್ದಂತೆ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ.
ಇನ್ನು ಚೈತ್ರಾ ಕುಂದಾಪುರ ಆರೋಗ್ಯ ನಾರ್ಮಲ್ ಇದೆ. ಅವರಿಗೆ ಫಿಟ್ಸ್ ಏನು ಕಂಡುಬಂದಿಲ್ಲ. ಮೆಡಿಕಲ್ ರಿಪೋರ್ಟ್ ನಾರ್ಮಲ್ ಇದೆ. ಮೊದಲ ಬಾರಿ ಇಸಿಜಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡುಬಂದಿತ್ತು. 24 ಗಂಟೆ ಬಳಿಕ ಮತ್ತೆ ಇಸಿಜಿ ಮಾಡಿದಾಗ ನಾರ್ಮಲ್ ಬಂದಿದೆ. ಎಂಆರ್ ಐ, ಇಇಜಿ ಸ್ಕ್ಯಾನಿಂಗ್ ಮಾಡಲಾಗಿದ್ದು ಫಿಟ್ಸ್ ಕಂಡುಬಂದಿಲ್ಲ. ನ್ಯೂರಾಲಜಿಸ್ಟ್ ಕೆಲ ಮಾತ್ರೆಗಳನ್ನು ಕೊಟ್ಟಿದ್ದಾರೆ ಎಂದು ವಿಕ್ಟೋರಿಯಾ ಆಸ್ಪತ್ರೆ ವೈದ್ಯ ದಿವ್ಯಪ್ರಕಾಶ್ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ