
ಪ್ರಗತಿವಾಹಿನಿ ಸುದ್ದಿ; ಉಡುಪಿ: ಉದ್ಯಮಿಗೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಆರೋಪಿ ಚೈತ್ರಾ ಕುಂದಾಪುರ ಅವರನ್ನು ಬಂಧಿಸಿದ್ದಾರೆ. ಬಂಧಿಸಿ ಕರೆದೊಯ್ಯುತ್ತಿದ್ದಾಗ ಚೈತ್ರಾ ಕುಂದಾಪುರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ತಡರಾತ್ರಿ ಚೈತ್ರಾ ಕುಂದಾಪುರ ಅವರನ್ನು ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಲಾಟ್ ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ವಶದಲ್ಲಿರುವಾಗಲೇ ಚೈತ್ರಾ ಕುಂದಾಪುರ, ತಮ್ಮ ಕೈಲಿದ್ದ ಉಂಗುರವನ್ನು ನುಂಗಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಅವರನ್ನು ತಡೆದಿದ್ದಾರೆ. ಇದಾದ ಬಳಿಕ ಕಾರಿನ ಗಾಜುಗಳನ್ನು ಒಡೆದು ಕೂಗಾಡಿ ಹೈಡ್ರಾಮಾ ಮಾಡಿದ್ದಾರೆ.
ಸಧ್ಯ ಚೈತ್ರಾ ಕುಂದಾಪುರ ಅವರನ್ನು ಉಡುಪಿಯಿಂದ ಬೆಂಗಳೂರಿಗೆ ಪೊಲಿಸರು ಕರೆ ತರುತ್ತಿದ್ದಾರೆ. ಉದ್ಯಮಿ ಗೋವಿಂದ್ ಬಾಬು ಎಂಬುವವರಿಗೆ ಚೈತ್ರಾ ಕುಂದಾಪುರ ಬೈಂದೂರು ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ಹೇಳಿ ನಾಟಕವಾಡಿ 7 ಕೋಟಿ ರೂಪಾಯಿ ವಂಚಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ