ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ರೈತರು ಕರೆ ನೀಡಿರುವ ಚಕ್ಕಾ ಜಾಮ್ ಹೋರಾಟಕ್ಕೆ ರಾಜ್ಯ ರೈತ ಸಂಘಟನೆಗಳು ಬೆಂಬಲ ನೀಡಿದ್ದು, ರಾಜ್ಯದೆಲ್ಲೆಡೆ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಲಿದೆ.
ಈ ನಡುವೆ ರೈತರ ಪ್ರತಿಭಟನಾ ಸ್ಥಳಗಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದು, ಪ್ರತಿಭಟನಾಕಾರರಿಗೆ ಪೊಲೀಸರು ಹಲವು ಷರತ್ತುಗಳನ್ನು ವಿಧಿಸಿದ್ದಾರೆ. ಒಂದು ವೇಳೆ ಷರತ್ತು ಉಲ್ಲಂಘಿಸಿದರೆ ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
* ಪ್ರತಿಭಟನೆ ವೇಳೆ ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆ ನೀಡುವಂತಿಲ್ಲ
* ಸಾರ್ವಜನಿಕ ಆಸ್ತಿ-ಪಾಸ್ತಿ ಹಾನಿ ಮಾಡುವಂತಿಲ್ಲ. ಒಂದು ವೇಳೆ ಮಾಡಿದರೆ ಆಯೋಜಕರೇ ಹೊಣೆ
* ಜನಸಾಮಾನ್ಯರಿಗೆ ತೊಂದರೆಯಾಗದಂತೆ ವರ್ತಿಸಬೇಕು
* ಕಾನೂನು ಸುವ್ಯವಸ್ಥೆಗೆ ದಕ್ಕೆಯುಂಟುಮಾಡುವಂತಿಲ್ಲ
* ಪ್ರತಿಭಟನೆ ವೇಳೆ ಪೊಲೀಸರ ಸಲಹೆ-ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ