
ಪ್ರಗತಿವಾಹಿನಿ ಸುದ್ದಿ: ಚಿಂತಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ್ ಸುಬ್ರಾಯ ವಿಧಿವಶರಾಗಿದ್ದಾರೆ.
ಚಕ್ರವರ್ತಿ ಸೂಲಿಬೆಲೆ ಅವರ ತಂದೆ ದೇವಿದಾಸ್ ಸುಬ್ರಾಯ ಶೇಟ್ ನಿಧನರಾಗಿದ್ದಾರೆ. ಸೂಲಿಬೆಲೆ ಸರ್ಕಾರಿ ಶಾಲೆಯಲ್ಲಿ ಮುಖ್ಯೋಪಾಧ್ಯಾಯರಾಗಿ ಅವರು ಸೇವೆ ಸಲ್ಲಿಸಿದ್ದರು. ತಮ್ಮ ಜೀವನವನ್ನು ಶಿಕ್ಷಣ ಸೇವೆಗೆ ಮೀಸಲಿಟ್ಟಿದ್ದರು. ವಿದ್ಯಾರ್ಥಿಗಳಿಗೆ ಪ್ರೇರಣಾ ಶಕ್ತಿಯಾಗಿ, ಮಾರ್ಗದರ್ಶಕರಾಗಿದ್ದರು. ಅವರ ಮಾರ್ಗದರ್ಶದಲ್ಲಿ ಬೆಳೆದ ಅನೇಕ ವಿದ್ಯಾರ್ಥಿಗಳು ಇಂದು ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ದೇವಿದಾಸ್ ಸುಬ್ರಾಯ್ ಅವರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದರು. ಇದೀಗ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ದೇವಿದಾಸ್ ಸುಬ್ರಾಯ್ ಅವರ ನಿಧನಕ್ಕೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.