Karnataka News

*ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೊರಗಜ್ಜ ಕ್ಷೇತ್ರದಲ್ಲಿಇ ಕೆಲದಿನಗಳ ಹಿಂದೆ ಚಕ್ರವರ್ತಿ ಸೂಲಿಬೆಲೆ ಪ್ರಚೋದನಕಾರಿ ಭಾಷಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಚೋದನಕಾರಿ ಭಾಷಣದಿಂದ ಕೋಮುದ್ವೇಷಕ್ಕೆ ಕಾರಣರಾಗುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಯಲ್ಲಿ ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ.

Home add -Advt

ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆ, ಎಷ್ಟು ದಿನ ಅಂತ ನಮ್ಮ ಹೆಣ್ಣುಮಕ್ಕಳನ್ನೇ ನೋಡ್ತೀರಿ? ಬೇರೆ ಸಮುದಾಯವನ್ನೂ ನೋಡಿ. ಹಿಂದೂ ಯುವಕರು ಅನ್ಯಧರ್ಮದವರನ್ನು ಪ್ರೀತಿಸಿ ವಿವಾಹವಾಗಿ ಎಂದು ಕರೆ ನೀಡಿದ್ದರು. ಸೂಲಿಬೆಲೆ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

Related Articles

Back to top button