Kannada NewsKarnataka NewsLatestPolitics

*ಮೊದಲು ನಿಮ್ಮ ಶಾಸಕರನ್ನು ಉಳಿಸಿಕೊಳ್ಳಿ; ಬಿ.ಎಲ್. ಸಂತೋಷ್ ಗೆ ಜಗದೀಶ್ ಶೆಟ್ಟರ್ ಟಾಂಗ್*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ನ 40-45 ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ವರಿಷ್ಠರು ಒಪ್ಪಿಗೆ ಕೊಟ್ಟರೆ ಒಂದು ದಿನದ ಕೆಲಸ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ರಾಷ್ಟ್ರ‍ೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹೇಳಿಕೆಗೆ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ.

ಬಿ.ಎಲ್.ಸಂತೋಷ್ ಹೇಳಿಕೆಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್, ಬಿ.ಎಲ್ ಸಂತೋಷ್ ತಮ್ಮ ಶಾಸಕರು, ಮಾಜಿ ಶಾಸಕರನ್ನು ಮೊದಲು ಉಳಿಸಿಕೊಳ್ಳಲಿ. ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಂಡರೆ ಸಾಕಾಗಿದೆ ಎಂದು ತಿರುಗೇಟು ನೀಡಿದ್ದಾರೆ.

Home add -Advt

ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಸರ್ಕಾರ ಮಾಡೋದನ್ನು ಬಿ.ಎಲ್ ಸಂತೋಷ್ ಮೊದಲು ಬಿಟ್ಟುಬಿಡಲಿ. ಬರೀ ಆಪರೇಷನ್ ಮಾಡಿ ಸರ್ಕಾರ ರಚನೆ ಮಡೋದೇನಾ ಇವರ ಕೆಲಸ? ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಬೆಳಿಗ್ಗೆಯಿಂದ ಸಂಜೆಯವರೆಗೂ ಆಪರೇಷನ್ ಮಾಡೋದೇ ಬಿಜೆಪಿ ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.

ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ಇವರ ಕೆಲಸ. ಪಕ್ಷದ ಸ್ಥಿತಿ ವಿಪಕ್ಷ ನಾಯಕನ ಆಯ್ಕೆ ಮಾಡಲಾಗದ ಸ್ಥಿತಿ ಇದೆ. ದಿನದಿಂದ ದಿನಕ್ಕೆ ಪಕ್ಷ ಅಧೋಗತಿಗೆ ಹೋಗ್ತಿದೆ. ಬಿಜೆಪಿ ಮುಳುಗುತ್ತಿರುವ ಹಡಗಾಗಿದೆ ಎಂದು ಗುಡುಗಿದ್ದಾರೆ.


Related Articles

Back to top button