Kannada NewsKarnataka NewsLatest
*ಕೃಷಿ ಸಚಿವರ ವಿರುದ್ಧ ನಕಲಿ ಲಂಚ ಪತ್ರ; ಇಬ್ಬರು ಅಧಿಕಾರಿಗಳು ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ಲಂಚ ಪಡೆದಿದ್ದಾರೆ ಎಂದು ಆರೊಪಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದ ಇಬ್ಬರು ಕೃಷಿ ಅಧಿಕಾರಿಗಳನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಕೆ.ಆರ್.ಪೇಟೆಯ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಗುರುಪ್ರಸಾದ್ ಹಾಗೂ ಕೃಷಿ ಅಧಿಕರಿ ಸುದರ್ಶನ್ ಬಂಧಿತರು. ಇಬ್ಬರು ಅಧಿಕಾರಿಗಳನ್ನು ಇಂದು ಸಿಐಡಿ ಅಧಿಕರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಇದೀಗ ಕೋರ್ಟ್ ಇಬ್ಬರು ಅಧಿಕಾರಿಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಮಾಡಿ ಕೃಷಿ ಅಧಿಕಾರಿಗಳೇ ರಾಜ್ಯಪಾಲರಿಗೆ ಪತ್ರ ಬರೆದ ವಿಚಾರ ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಗಿತ್ತು. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿತ್ತು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ