Kannada NewsKarnataka NewsLatestPolitics
*ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಅಧಿಕಾರಿಗಳ ಪತ್ರ ಪ್ರಕರಣ; CID ತನಿಖೆಗೆ ತೀರ್ಮಾನ*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಕೃಷಿ ಅಧಿಕಾರಿಗಳು ಪತ್ರ ಬರೆದಿರುವ ಪ್ರಕರಣವನ್ನು ಸಿಐಡಿ ತನಿಖೆ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಮಂಡ್ಯ ಜಿಲ್ಲೆ ಕೃಷಿ ಅಧಿಕಾರಿಗಳು ಕೃಷಿ ಸಚಿವರ ವಿರುದ್ಧ ಬರೆದಿದ್ದಾರೆನ್ನಲಾದ ಪತ್ರದ ಕುರಿತು CID ತನಿಖೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಗೃಹ ಸಚಿವರ ಜತೆ ಚರ್ಚೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಕೃಷಿ ಸಚಿವ ಚಲುವರಾಯಸ್ವಾಮಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ 7 ಜನ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದು ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ರಾಜ್ಯ ಪಾಲರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ