Kannada NewsKarnataka NewsLatest

*15-20 ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ; ಮತ್ತಷ್ಟು ಕುತೂಹಲ ಮೂಡಿಸಿದ ಸಚಿವರ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ; ಮೈಸೂರು: ಬಿಜೆಪಿ ಸೇರಿದ್ದ ಕಾಂಗ್ರೆಸ್ ನ ಶಾಸಕರು ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಬೆನ್ನಲ್ಲೇ ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ಕುತೂಹಲ ಇಮ್ಮಡಿಗೊಳಿಸಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, 15-20 ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

15-20 ಹಾಲಿ ಹಾಗೂ ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ಸೇರುವವರ ಹೆಸರನ್ನು ಈಗ ಹೇಳಲು ಸಾಧ್ಯವಿಲ್ಲ. ಕೆಲ ದಿನಗಳಲ್ಲೇ ಎಲ್ಲವೂ ಅಂತಿಮವಾಗಲಿದೆ. ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ ಬರುವುದು ಖಚಿತ ಎಂದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button