Kannada NewsKarnataka NewsLatestPolitics

*ಲಂಚದ ಆರೋಪ; ಸಚಿವ ಚಲುವರಾಯಸ್ವಾಮಿ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ತಮ್ಮ ವಿರುದ್ಧ ಲಂಚದ ಆರೋಪ ಮಾಡಿ ರಾಜ್ಯಪಾಲಕರಿಗೆ ಕೃಷಿ ಅಧಿಕಾರಿಗಳು ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೃಷಿ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯಪಾಲರಿಗೆ ಕೃಷಿ ಅಧಿಕಾರಿಗಳು ಪತ್ರ ಬರೆದ ಬಗ್ಗೆ ನನಗೆ ಗೊತ್ತಿಲ್ಲ. ಕೃಷಿ ಜಂಟಿ ನಿರ್ದೇಶಕರ ಜೊತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂದು ಮಾಹಿತಿ ನೀಡಿದ್ದಾರೆ ಎಂದರು.

Home add -Advt

ಪಾಪ ಬಹಳ ಹುಡುಕಿ ಹುಡುಕಿ ಏನೇನೋ ಮಾಡುತ್ತಿದ್ದಾರೆ. ಹಾಗೇನಾದರೂ ಆಗಿದ್ದರೆ ತನಿಖೆ ನಡೆಸಲು ಸೂಚಿಸುತ್ತೇನೆ. ನಮ್ಮ ಇಲಾಖೆ ಕಾರ್ಯದರ್ಶಿಗಳಿಗೂ ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ.


Related Articles

Back to top button