Politics

*ಸಿಎಂ, ಡಿಸಿಎಂಗೆ ಅಭಿನಂದನೆ ಸಲ್ಲಿಸಿದ ಮಂಡ್ಯ ಜಿಲ್ಲೆಯ ಶಾಸಕರು*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟದಲ್ಲಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು ಸರ್ಕಾರ ಅನುಮೋದನೆ ನೀಡಿರುವುದು ಹಾಗೂ ಸರ್ಕಾರಿ ಸ್ವಾಮ್ಯದ ಮೈಸೂರು ಸಕ್ಕರೆ ಕಾರ್ಖಾನೆ ಕಳೆದ 24 ವರ್ಷಗಳಿಂದ ಬಾಕಿ ಉಳಿಸಿಕೊಂಡಿದ್ದ ವಿದ್ಯುತ್‌ ಬಿಲ್‌ ರೂ. 52 ಕೋಟಿ ಮನ್ನಾ ಮಾಡಿರುವ ಹಿನ್ನೆಲೆಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರ ನೇತೃತ್ವದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು ಇಂದು ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌,‌ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಶಾಸಕರಾದ ನೆ.ಲ.ನರೇಂದ್ರಸ್ವಾಮಿ, ರಮೇಶ ಬಂಡಿಸಿದ್ದೇಗೌಡ, ದರ್ಶನ್‌ ಪುಟ್ಡಣ್ಣಯ್ಯ, ಉದಯಗೌಡ, ರವಿಶಂಕರ್‌, ಹರೀಶ್‌ ಗೌಡ, ದಿನೇಶ ಗೂಳಿಗೌಡ, ಮಧು ಮಾದೇಗೌಡ, ಮೈಷುಗರ್‌ ಅಧ್ಯಕ್ಷ ಗಂಗಾಧರ್‌ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button