ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರ ದುರಂತ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದ್ದು, ನಿವೃತ್ತ ನ್ಯಾ.ಬಿ.ಎ.ಪಾಟೀಲ್ ನೇತೃತ್ವದಲ್ಲಿ ಸರ್ಕಾರ ತನಿಖೆ ಆದೇಶ ನೀಡಿದೆ.
ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳ ಸಾವು ಪ್ರಕರಣದ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ನಿವೃತ್ತ ನ್ಯಾಯಾಧೀಶರ ನೇಮಕ ಮಾಡಿ ತನಿಖೆ ನಡೆಸಲು ಆದೇಶ ನೀಡಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಬಿ.ಎ ಪಾಟೀಲ್ ನೇತೃತ್ವದಲ್ಲಿ ಏಕಸದಸ್ಯ ತನಿಖಾಯೋಗ ರಚನೆ ಮಾಡಿದ್ದು, ಒಂದು ತಿಂಗಳಲ್ಲಿ ವರದಿ ನೀಡುವಂತೆ ಆದೇಶ ಹೊರಡಿಸಿದೆ.
ಇಬ್ಬರು ವೈದ್ಯರು ಸೇರಿ 8 ಮಂದಿ ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ