Kannada NewsKarnataka NewsLatest

*ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ ಕೇಸ್: ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ*

ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡೇಟಿಗೆ ಮೂವರು ಬಲಿ ಪ್ರಕರಣದ ತನಿಖೆಯನ್ನು ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.

ಹನೂರು ವನ್ಯಜೀವಿ ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟ ಗಸ್ತಿನ ಕರದಿಕಲ್ಲು ಒಡ್ಡು ಎಂಬ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಹಸು ಹುಡುಕಲೆಂದು ಕಾಡಿನೊಳಗೆ ಅಕ್ರಮವಾಗಿ ನುಗ್ಗಿದ್ದವರ ಮೇಲೆ ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಮೂವರು ಮೃತಪಟ್ಟಿದ್ದರು. ಪೀಟರ್, ಕುಮಾರ್, ಅಂಥೋಣಿ ಸ್ವಾಮಿ ಮೃತ ದಿರ್ದೈವಿಗಳು. ಅಂಥೋಣಿಸ್ವಾಮಿ ಪತ್ನಿ ನೀಡಿದ ದೂರಿನ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಇದೀಗ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ್ದು, ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಿದ್ದಾರೆ. 7 ದಿನಗಳ ಒಳಗಾಗಿ ವರದಿ ನೀಡುವಂತೆ ಸೂಚಿಸಿದ್ದಾರೆ.


Related Articles

Back to top button