
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸ್ಫೋಟಕ ತಿರುವು ಲಭ್ಯವಾಗಿದೆ. ಆಕ್ಸಿಜನ್ ದುರಂತದಲ್ಲಿ ಸಾವನ್ನಪ್ಪಿದ್ದು 24 ಜನರಲ್ಲ, ಬರೋಬ್ಬರಿ 36 ಜನರು ಸಾವನ್ನಪ್ಪಿದ್ದಾರೆ ಎಂದು ನಿವೃತ್ತ ನ್ಯಾಯಾಧೀಶರ ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದೆ.
ಚಾಮರಾಜನಗರ ದುರಂತ ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಾಧೀಶ ಎ.ಎಸ್.ವೇಣುಗೋಪಾಲಗೌಡ ನೇತೃತ್ವದ ಸಮಿತಿ ಹೈಕೋರ್ಟ್ ಗೆ ನೀಡಿದ ವರದಿ ಇದೀಗ ಬಹಿರಂಗವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ರಾತ್ರಿ 10 ಗಂಟೆಯಿಂದ ಬೆಳಗಿನ ಜಾವ 2:30ರವರೆಗೆ ಆಕ್ಸಿಜನ್ ಇರಲಿಲ್ಲ. ಈ ವೇಳೆಯಲ್ಲಿ36 ರೋಗಿಗಳು ಸಾವನ್ನಪ್ಪಿದ್ದು, ಎಲ್ಲರೂ ಆಕ್ಸಿಜನ್ ಕೊರತೆಯಿಂದಾಗಿಯೇ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಆಸ್ಪತ್ರೆ ಆಡಿಟನ್ ವರದಿಯಲ್ಲಿ 7 ಜನರು ಮೆದುಳಿಗೆ ರಕ್ತ ಸಂಚಾರವಾಗದೇ ಸಾವನ್ನಪ್ಪಿದ್ದಾರೆ ಹಾಗೂ 3 ಸೋಂಕಿತರು ಮಾತ್ರ ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ. ಅಲ್ಲದೇ 14 ರೋಗಿಗಳು ಕೋವಿಡ್ ಸಹಜ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿತ್ತು. ನ್ಯಾಯಾಧೀಶರ ಸಮಿತಿ ಈ ಆಡಿಟ್ ವರದಿಯನ್ನು ಅಲ್ಲಗಳೆದಿದೆ.
ಬ್ಲ್ಯಾಕ್ ಫಂಗಸ್; ಇಬ್ಬರು ಬಲಿ
ಸ್ವಂತ ಹಣದಲ್ಲಿ ಸುಸಜ್ಜಿತ ಉಚಿತ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಿದ ಡಿಸಿಎಂ ಸವದಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ