Latest

24 ರೋಗಿಗಳ ಸಾವು ಪ್ರಕರಣ; ಘಟನೆ ಬಗ್ಗೆ ಸ್ಪಷ್ಟನೆ ನೀಡಿದ ಆರೋಗ್ಯ ಸಚಿವ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರದಲ್ಲಿ 24 ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಆಸ್ಪತ್ರೆ ವೈದ್ಯರು ನೀಡಿದ ಮಾಹಿತಿ ವಿವರಿಸಿದ್ದಾರೆ.

ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜಿಲ್ಲೆಯಲ್ಲಿ 24 ಗಂಟೆಯಲ್ಲಿ ಒಟ್ಟು 24 ರೋಗಿಗಳು ಸಾವನ್ನಪ್ಪಿದ್ದಾರೆ ಇವರಲ್ಲಿ 23 ಕೊರೊನಾ ಸೋಂಕಿತರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದರು.

Home add -Advt

ಜಿಲ್ಲಾಸ್ಪತ್ರೆಯಲ್ಲಿ ಒಟ್ಟು 123 ಕೊರೊನಾ ಸೋಂಕಿತರು ದಾಖಲಾಗಿದ್ದು, ಅವರಲ್ಲಿ 14 ಜನರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ ಬೆಳಿಗ್ಗೆ 7 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ 14 ಸೋಂಕಿತರು ಸಾವನ್ನಪ್ಪಿದ್ದಾರೆ. ಇವರು ಕೋವಿಡ್ ಸಹಜ ಕಾಯಿಲೆ ಉಲ್ಬಣದಿಂದ ಮೃತಪಟ್ಟವರಾಗಿದ್ದಾರೆ. ಮಧ್ಯರಾತ್ರಿ 12 ಗಂಟೆಯಿಂದ ಬೆಳಗಿನ ಜಾವ 3 ಗಂಟೆ ಅವಧಿಯಲ್ಲಿ 3 ರೋಗಿಗಳು ಸಾವನ್ನಪ್ಪಿದ್ದಾರೆ. ಈ ಮೂವರು ಮಾತ್ರ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ ಎಂದರು.

ಈ ಪ್ರಕರಣದ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ತನಿಖೆಗೆ ಆದೇಶಿಸಿದ್ದಾರೆ. ತನಿಖೆ ನಡೆದು ಸತ್ಯಾಸತ್ಯತೆ ಹೊರಬರಲಿ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಸಿಎಂ ಯಡಿಯೂರಪ್ಪ, ಸಚಿವ ಸುಧಾಕರ್ ರಾಜೀನಾಮೆಗೆ ಸಿದ್ದರಾಮಯ್ಯ ಆಗ್ರಹ

Related Articles

Back to top button