Latest

ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಯಡಿಯೂರಪ್ಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದುರಂತ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಕಳೆದ 24 ಗಂಟೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ನಾಳೆ ಸಂಜೆ 4 ಗಂಟೆಗೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದು, ಜಿಲ್ಲಾಸ್ಪತ್ರೆಗಳ ಸ್ಥಿತಿಗತಿ, ಆಕ್ಸಿಜನ್ ವ್ಯವಸ್ಥೆ, ಬೆಡ್, ಚಿಕಿತ್ಸೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

Home add -Advt

ತಮ್ಮದೇ ಉಸ್ತುವಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಿಂದ ರೋಗಿಗಳು ಪರದಾಡುತ್ತಿದ್ದರೂ ವ್ಯಸ್ಥೆಗಳನ್ನು ಮಾಡದ ಸಚಿವ ಸುರೇಶ್ ಕುಮಾರ್ ವಿರುದ್ಧ ಸಿಎಂ ಗರಂ ಆಗಿದ್ದಾರೆ ಎಂದು ತಿಳಿದಿಬಂದಿದೆ.
24 ಗಂಟೆಯಲ್ಲಿ 22 ಅಲ್ಲ, 24 ರೋಗಿಗಳ ಸಾವು

Related Articles

Back to top button