Latest

ಆಕ್ಸಿಜನ್ ಕೊರತೆಯಿಂದಲೇ 24 ರೋಗಿಗಳ ಸಾವು; ಸಮಿತಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ 24 ರೋಗಿಗಳ ಸಾವು ಪ್ರಕರಣಕ್ಕೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಹೈಕೋರ್ಟ್ ಗೆ ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ವರದಿ ನೀಡಿದೆ.

ಇತ್ತೀಚೆಗೆ ಜಿಲ್ಲಾಸ್ಪತ್ರೆಯಲ್ಲಿ 24 ಗಂಟೆಯಲ್ಲಿ 24 ರೋಗಿಗಳು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದರು. ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ನಿವೃತ್ತ ನ್ಯಾಯಮೂರ್ತಿ ಎ.ಎನ್ ವೇಣುಗೋಪಾಲಗೌಡ ನೇತೃತ್ವದ ಸಮಿತಿ ರಚಿಸಲಾಗಿತ್ತು.

ಇದೀಗ ಸಮಿತಿ ಹೈಕೋರ್ಟ್ ಗೆ ವರದಿ ಸಲ್ಲಿಸಿದ್ದು, ಆಕ್ಸಿಜನ್ ಕೊರತೆಯಿಂದಲೇ 24 ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಚಾಮರಾಜನಗರ ಡಿ ಸಿ ಎಂ.ಆರ್ ರವಿ ಅವರ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button