
ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಗ್ರಾಮ ಮಂಚಾಯತಿ ಚುನಾವಣೆಯಲ್ಲಿ ಪತ್ನಿ ಅವಿರೋಧವಾಗಿ ಆಯ್ಕೆಯಾದ ಬೆನ್ನಲ್ಲೇ ಪತಿ ನೇಣಿಗೆ ಶರಣಾದ ಘಟನೆ ಚಾಮರಾಜನಗರದ ದೊಡ್ಡರಾಯ ಪೇಟೆಯಲ್ಲಿ ನಡೆದಿದೆ.
ನಿಂಗರಾಜು (27) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಪತ್ನಿ ಗಗನ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅವಿರೋಧ ಆಯ್ಕೆಯಾದ ಮರುದಿನವೇ ಪತಿ ನಿಂಗರಾಜು ಆತ್ಮಹತ್ಯೆಗೆ ಶರಣಾಗಿದ್ದಾನೆ.
ರಾತ್ರಿ ಸ್ನೇಹಿತನಿಗೆ ಪಾರ್ಟಿ ಕೊಟ್ಟು ವಾಪಸ್ ಆದ ನಿಂಗರಾಜು ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಮದುವೆಯಾಗಿ ನಾಲ್ಕು ವರ್ಷವಾದರೂ ಮಕ್ಕಳಿಲ್ಲ ಎಂದು ನೊಂದು ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ.
ಸ್ನೇಹಿತನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ; ಕರ್ನಲ್ ಬಂಧನ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ