Kannada NewsKarnataka NewsLatest

*ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದಾಗ ಮತ್ತೊಂದು ದುರಂತ: ಚಿರತೆ ದಾಳಿಗೆ 8 ವರ್ಷದ ಬಾಲಕ ಬಲಿ*

ಪ್ರಗತಿವಾಹಿನಿ ಸುದ್ದಿ: ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾದೇಶ್ವರ ಸ್ವಾಮಿ ದರ್ಶನಕ್ಕೆಂದು ಪಾದಯಾತ್ರೆ ತೆರಳುತ್ತಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿ ತಿಂದು ತೇಗಿರುವ ಘಟನೆ ನಡೆದಿದೆ.

Home add -Advt

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಈ ಘಟನೆ ನಡೆದಿದೆ. ಬೆಂಅಗ್ಳೂರು ಮೂಲದ 8 ವರ್ಷದ ಬಾಲಕ ಹರ್ಷಿತ್ ಮೃತ ದುರ್ದೈವಿ. ಹರ್ಷಿತ್ ತನ್ನ ಪೋಷಕರೊಂದಿಗೆ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಪಾದಯಾತ್ರೆ ತೆರಳುತ್ತಿದ್ದ. ಇಂದು ಮುಂಜಾನೆ ಸುಮಾರು 7 ಗಂಟೆಯ ವೇಳೆಗೆ ದಟ್ಟ ಅರಣ್ಯದ ಹಾದಿಯಲ್ಲಿ ಸಾಗುತ್ತಿದ್ದಾಗ, ಚಿರತೆ ದಾಳಿ ನಡೆಸಿದ್ದು, ಬಾಲಕನನ್ನು ಕಾಡಿಗೆ ಎಳೆದೊಯ್ದಿದೆ. ಪೋಷಕರು, ಪಾದಯಾತ್ರೆಯಲ್ಲಿದ್ದ ಭಕ್ತರು ಕಿರುಚಾಡಿದರೂ ಪ್ರಯೋಜನವಾಗಿಲ್ಲ. ದಾರಿಯಿಂದ ಸ್ವಲ್ಪ ದೂರದಲ್ಲಿ ಕಾಡಿನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಚಿರತೆ ಬಾಲಕನ ಅರ್ಧ ದೇಹವನ್ನು ತಿಂದು ಹಾಕಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಮತ್ತು ಮಲೆ ಮಹದೇಶ್ವರ ಬೆಟ್ಟದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜನವರಿ ಮತ್ತು ಫೆಬ್ರವರಿಯಲ್ಲಿಯೂ ಚಿರತೆ ದಾಳಿಗೆ ಇಬ್ಬರು ಬಲಿಯಾಗಿದ್ದರು. ಇದೀಗ ಬಾಲಕ ಚಿರತೆ ದಾಳಿಗೆ ಬಲಿಯಾಗಿದ್ದು, ಭಕ್ತರಲ್ಲಿ ಹಾಗೂ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.


Related Articles

Back to top button