Latest

ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆಯ ಪತ್ನಿ

ಪ್ರಗತಿವಾಹಿನಿ ಸುದ್ದಿ; ಚಾಮರಾಜನಗರ: ಒಂದು ವರ್ಷದ ಹಿಂದಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಪೊಲೀಸ್ ಪೇದೆಯ ಪತ್ನಿಯೊಬ್ಬರು ವಸತಿ ಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಕೊಳ್ಳೇಗಾಲ ಪಟ್ಟಣ ಪೊಲೀಸ್ ಠಾಣೆಯ ಪೇದೆಯಾದ ಪರುಶುರಾಮ್ ಪತ್ನಿ ನಾಗರತ್ನ (19) ಆತ್ಮಹತ್ಯೆಗೆ ಶರಣಾದ ಮಹಿಳೆ. ಪರಶುರಾಮ್ ಮೂಲತಃ ರಾಯಚೂರಿನವರಾಗಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಕೊಳ್ಳೇಗಾಲ ಪಟ್ಟಣದಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Home add -Advt

ರಾಯಚೂರು ಜಿಲ್ಲೆಯ ತನ್ನ ಸಂಬಂಧಿಕರಾದ ನಾಗರತ್ನಳನ್ನು ಒಂದು ವರ್ಷದ ಹಿಂದೆ ಮದುವೆಯಾಗಿ ಇಲ್ಲಿನ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು. ಶನಿವಾರ ಎಂದಿನಂತೆ ಕರ್ತವ್ಯಕ್ಕೆ ತೆರಳಿದ್ದ ಪರುಶುರಾಮ್ ರಾತ್ರಿ ಊಟದ ಸಮಯಕ್ಕೆ ಮನೆಗೆ ಹಿಂದಿರುಗಿದ್ದಾರೆ. ಈ ವೇಳೆ ಎಷ್ಟು ಬಾರಿ ಬಾಗಿಲು ಬಡಿದರೂ ನಾಗರತ್ನ ಮನೆಯ ಬಾಗಿಲು ತೆರೆಯಲಿಲ್ಲ. ಇದರಿಂದ ಗಾಬರಿಯಾದ ಪರುಶುರಾಮ್ ಬಾಗಿಲು ಒಡೆದು ಮನೆಯೊಳಗೆ ಹೋಗಿ ನೋಡಿದಾಗ ನಾಗರತ್ನ ನೇಣಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ಕೊಳ್ಳೇಗಾಲ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button