ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ಮರುತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಗುಂಡೂರಾವ್, ಈ ಹಿಂದಿನ ಬಿಜೆಪಿ ಸರ್ಕಾರ ತನಿಖೆಗೆ ಕೆಲವರನ್ನು ನೇಮಕ ಮಾಡಿತ್ತು. ಆದರೆ ಆ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ತನಿಖೆ ಎಲ್ಲಿಯವರೆಗೆ ಬಂದಿದೆ ಎಂಬ ಮಾಹಿತಿಯೂ ಇಲ್ಲ. ಹಾಗಾಗಿ ನಮ್ಮ ಸರ್ಕಾರ ಪ್ರಕರಣದ ಮರು ತನಿಖೆಗೆ ಆದೇಶ ನೀಡುತ್ತಿದೆ ಎಂದರು.
ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಮನ್ವಯ ಇರುವುದರಿಂದ ಮರು ತನಿಖೆ ನಡೆಸಬೇಕಾಗುತ್ತದೆ ಎಂದು ಹೇಳಿದರು.
2021 ಮೇ 2ರಂದು ಕೋವಿಡ್ ಸಂದರ್ಭದಲ್ಲಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ 36 ಜನರು ಆಕ್ಸಿಜನ್ ಕೊರತೆಯಿಂದ ದಾರುಣವಾಗಿ ಸಾವನ್ನಪ್ಪಿದ್ದರು.
https://pragati.taskdun.com/lokayuktaraidkushalanagara-aeearrest/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ