
ಪ್ರಗತಿವಾಹಿನಿ ಸದ್ದಿ, ದುಬೈ: ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ 6 ವಿಕೆಟ್ ಜಯಗಳಿಸಿದೆ.
ಇನ್ನೂ ಏಳೂವರೆ ಓವರ್ ಇರುವಾಗಲೇ ರೋಹಿತ್ ಶರ್ಮಾ ಟೀಮ್ ಜಯಭೇರಿ ಭಾರಿಸಿತು. ಜೊತೆಗೆ ವಿರಾಟ್ ಕೋಹ್ಲಿ ಅಜೇಯ ಶತಕ ಭಾರಿಸಿದರು. ವಿರಾಟ್ ಕೋಹ್ಲಿಗೆ 51 ನೇ ಏಕ ದಿನ ಶತಕ ಇದಾಗಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 241 ರನ್ ಗೆ ಸರ್ವ ಪತನ ಕಂಡಿತು. ಇದನ್ನು ಬೆನ್ನಟ್ಟಿದ ಭಾರತ ಟೀಮ್ 42.3 ಓವರ್ ಗಳಲ್ಲಿ 4 ವಿಕೆಟ್ ಗೆ 244 ರನ್ ಗಳಿಸಿ ಗೆಲುವಿನ ಗುರಿ ಮುಟ್ಟಿತು. ಈ ಮೂಲಕ 2017ರ ಚಾಂಪಿಯನ್ ಟ್ರೋಪಿಯಲ್ಲಿ ಪಾಕ್ ಎದುರಿನ ಸೋಲಿನ ಸೇಡು ತೀರಿಸಿಕೊಂಡಿತು.
ಟೂರ್ನಿಯ ಎ ಗುಂಪಿನಲ್ಲಿ ಸತತ 2ನೇ ಗೆಲುವು ದಾಖಲಿಸಿದ ಭಾರತ ಬಹುತೇಕ ಸೆಮಿ ಫೈನಲ್ ಸ್ಥಾನವನ್ನು ಖಚಿತಪಡಿಸಿಕೊಂಡಿತು. ಮತ್ತೊಂದೆಡೆ ಪಾಕಿಸ್ತಾನ 2ನೇ ಸೋಲಿನ ಮೂಲಕ ಲೀಗ್ ಹಂತದಲ್ಲೇ ಟೂರ್ಮಿಯಿಂದ ಹೊರಬಿದ್ದಿತು. ಭಾರತ ಮಾ.7ರಂದು ನ್ಯೂಜಿಲ್ಯಾಂಡ್ ವಿರುದ್ಧ ಮುಂದಿನ ಪಂದ್ಯ ಆಡಲಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಟ್ವೀಟ್ ಮಾಡಿದ್ದಾರೆ.
ಚಾಂಪಿಯನ್ ಟ್ರೋಫಿ ಪಂದ್ಯಾಕೂಟದಲ್ಲಿ ಪಾಕಿಸ್ತಾನ ವಿರುದ್ಧದ ಇಂದಿನ ಅಭೂತಪೂರ್ವ ಗೆಲುವನ್ನು ನೋಡಿ ಆನಂದಿಸಿದೆ. ಭಾರತದ ಲಯಬದ್ಧ ಬೌಲಿಂಗ್, ವಿರಾಟ್ ಕೊಹ್ಲಿಯ ಅಮೋಘ ಬ್ಯಾಟಿಂಗ್, ತಂಡದ ಸಂಘಟಿತ ಹೋರಾಟ ಪಾಕಿಸ್ತಾನವನ್ನು ಬಗ್ಗುಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಜಯದ ನಗೆ ಬೀರಿದ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮವರ ಈ ಗೆಲುವಿನ ಓಟ ಪಂದ್ಯಾವಳಿಯುದ್ದಕ್ಕೂ ಹೀಗೆಯೇ ಮುಂದುವರೆಯಲಿ, ಭಾರತ ಚಾಂಪಿಯನ್ ಆಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ರೋಚಕ ಜಯ ಗಳಿಸಿದ ಭಾರತ ಕ್ರಿಕೆಟ್ ತಂಡಕ್ಕೆ ಹೃದಯಪೂರ್ವಕ ಅಭಿನಂದನೆಗಳು ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ನಲ್ಲಿ ಸಂಘಟಿತ ಶ್ರೇಷ್ಠ ಪ್ರದರ್ಶನ ನೀಡಿದ ಎಲ್ಲಾ ಆಟಗಾರರು ಭಾರತಕ್ಕೆ ಅದ್ಭುತ ಗೆಲುವು ತಂದುಕೊಟ್ಟಿದ್ದು, ನಮ್ಮ ಹೆಮ್ಮೆಯ ಕ್ಷಣಗಳಿಗೆ ಕಾರಣರಾಗಿದ್ದಾರೆ.
•Congratulations to Team India on a fantastic victory against Pakistan in the Champions Trophy 2025. A truly dominant performance with both bat and ball, showcasing skill, determination, and teamwork. Proud moment for all cricket fans.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ