Politics

*ಚಾಮುಂಡಿ ಬೆಟ್ಟಕ್ಕೆ ತೆರಳಿ ನಾಡಿನ ಅಧಿದೇವತೆ ದರ್ಶನ ಪಡೆದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ: ಶ್ರಾವಣ ಮಾಸದ ಮೊದಲ ಶುಭ ಶುಕ್ರವಾರದಂದು ಪುರಾಣ ಪ್ರಸಿದ್ಧ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ನಾಡಿನ ಅಧಿದೇವತೆ ತಾಯಿ ಶ್ರೀ ಚಾಮುಂಡೇಶ್ವರಿಯ ದರ್ಶನ ಪಡೆದರು.

ನಾಡಿನ ಸರ್ವ ಜನರ ಹಿತ ಕಾಯುವಂತೆ ಶಕ್ತಿದಾತೆ ತಾಯಿ ಚಾಮುಂಡೇಶ್ವರಿಯಲ್ಲಿ ಸಚಿವರು ಪ್ರಾರ್ಥಿಸಿದರು.

ನಂತರ ಚಾಮುಂಡಿ ಬೆಟ್ಟದಲ್ಲಿ ಸಚಿವರು, ತಮ್ಮ ಇಲಾಖೆಯ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳ ಜೊತೆ ಅನೌಪಚಾರಿಕ ಚರ್ಚೆ ನಡೆಸಿ, ಮೈಸೂರು ಜಿಲ್ಲೆಯಲ್ಲಿ ಇಲಾಖೆಯ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಿದರು.

ಈ ವೇಳೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಡಿ ಮಂಜುನಾಥ್ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ಕಾಂಗ್ರೆಸ್ ಜನಾಂದೋಲನದಲ್ಲಿ ಭಾಗಿ

ಇದಕ್ಕೂ ಮುನ್ನ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ್ದ ಕೇಂದ್ರದ ಎನ್ ಡಿ ಎ ಸರ್ಕಾರದಿಂದ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯ ಹಾಗೂ ಭ್ರಷ್ಟ ಬಿಜೆಪಿ-ಜೆಡಿಎಸ್ ಪಾಪದ ಪಾದಯಾತ್ರೆಯ ವಿರುದ್ಧದ “ಸತ್ಯ ಮೇವ ಜಯತೆ” ಕಾಂಗ್ರೆಸ್ ಬೃಹತ್ ಜನಾಂದೋಲನದಲ್ಲಿ ಭಾಗವಹಿಸಿದರು.

ಜನಾಂದೋಲನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಡಾ. ಜಿ.ಪರಮೇಶ್ವರ್, ಎಚ್.ಕೆ. ಪಾಟೀಲ್ ಸೇರಿದಂತೆ ಸಂಪುಟದ ಎಲ್ಲ ಸಚಿವರು, ಪಕ್ಷದ ಎಲ್ಲ ಶಾಸಕರು, ಎಲ್ಲ ಸಂಸದರು, ಪಕ್ಷದ ಮುಖಂಡರು, ಲಕ್ಷಾಂತರ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button