Belagavi NewsBelgaum NewsKannada NewsKarnataka NewsNational

*ಭಾರಿ ಮಳೆ ಸಾಧ್ಯತೆ: ಐದು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೊಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೆಲ ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿತ್ತು ಇದೀಗ ಮತ್ತೆ ಮಳೆ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಆಗಸ್ಟ್ 12 ರಿಂದ ಮಳೆಯ ಪ್ರಮಾಣ ಕಡಿಮೆಯಾಗಲಿದೆ.

Home add -Advt

ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದ‌ರ್, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Related Articles

Back to top button