ಪ್ರಗತಿವಾಹಿನಿ ಸುದ್ದಿ: ದೇಶದಲ್ಲಿ ಹೊಸ ವೈರಸ್ ಪತ್ತೆಯಾಗಿದ್ದು, ಮಾರಣಾಂತಿಕ ವೈರಸ್ ಸೋಂಕಿಗೆ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ.
ಗುಜರಾತ್ ನ ಸಬರಕಾಂತ ಜಿಲ್ಲೆಯಲ್ಲಿ ಚಂಡೀಪುರ ವೈರಸ್ ಎಂಬ ಹೊಸ ಸೋಂಕು ಮಕ್ಕಳನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಮಹಾಮಾರಿಗೆ ಇದೀಗ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಮೂರು ಮಕ್ಕಳ ಸ್ಥಿತಿ ಗಂಭೀರವಾಗಿದೆ.
ಸಬರಕಾಂತ ಜಿಲ್ಲೆಯ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದ ನಾಲ್ವರು ಮಕ್ಕಳಲ್ಲಿ ಚಂದೀಪುರ ವೈರಸ್ ದೃಢಪಟ್ಟಿತ್ತು. ಚಿಕಿತ್ಸೆ ಫಲಿಸದೇ ಮಕ್ಕಳು ಸಾವನ್ನಪ್ಪಿದ್ದಾರೆ. ಮೂವರು ಮಕ್ಕಳಿಗೆ ಚಿಕಿತ್ಸೆ ಮುಂದುವರೆದಿದೆ.
ಚಂಡೀಪುರ ವೈರಸ್ ಸೊಳ್ಲೆ, ನೊಣ, ಸ್ಯಾಂಡ್ ಫ್ಲೈಗಳಿಂದ ಹರಡುತ್ತದೆ. 2003ರಲ್ಲಿ ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಲ್ಲಿಯೂ ಈ ಸೋಂಕು ಆತಂಕ ಸೃಷ್ಟಿಸಿತ್ತು. ಚಂಡೀಪುರ ವೈರಸ್ ಸೋಂಕಿತರಲ್ಲಿ ತೀವ್ರ ಜ್ವರ, ಅತಿಯಾದ ತಲೆನೋವು, ವಾಂತಿ, ಪ್ರಜ್ಞಾಹೀನತೆಯಂತಹ ಲಕ್ಷಣಗಳು ಕಂಡುಬರುತ್ತವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ