ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಿಮಾನ ನಿಲ್ದಾಣದಲ್ಲಿಯೇ ವಶಕ್ಕೆ ಪಡೆದುಕೊಂಡಿರುವ ಘಟನೆ ನಡೆದಿದೆ.
ಚಂದ್ರಬಾಬು ನಾಯ್ಡು ಅವರು ಚಿತ್ತೂರಿನಲ್ಲಿ ಪಕ್ಷದ ಪರವಾಗಿ ಚುನಾವಣಾ ಪ್ರಚಾರಕ್ಕೆ ತೆರಳಲು ಮುಂದಾಗಿದ್ದರು. ಆದರೆ ಪ್ರಚಾರಕ್ಕೆ ಅನುಮತಿ ನಿರಾಕರಿಸಲಾಗಿತ್ತು ಎನ್ನಲಾಗಿದೆ. ಚಿತ್ತೂರಿಗೆ ತೆರಳಲೆಂದು ರೇಣಿಗುಂಟಾದಲ್ಲಿರುವ ತಿರುಪತಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ತಡೆದಿದ್ದಾರೆ. ಈ ವೇಳೆ ಪೊಲೀಸರ ನಡೆ ಖಂಡಿಸಿ ಚಂದ್ರಬಾಬು ನಾಯ್ಡು ವಿಮಾನ ನಿಲ್ದಾಣದಲ್ಲೇ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಪೊಲಿಸರು ನಾಯ್ಡು ಅವರನ್ನು ವಶಕ್ಕೆ ಪಡೆದಿದ್ದಾರೆ.
ಚಿತ್ತೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲು ಅನುಮತಿಯಲ್ಲಿ ಚುನಾವಣಾ ಆಯೋಗ ಕೊನೇ ಕ್ಷಣದಲ್ಲಿ ಬದಲಾವಣೆ ಮಾಡಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಚಂದ್ರಬಾಬು ನಾಯ್ಡು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ಪೊಲೀಸರ ಕ್ರಮವನ್ನು ಟಿಡಿಪಿ ನಾಯಕರು ಖಂಡಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ