Latest

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್; ಹುಬ್ಬಳ್ಳಿ-ಬೆಳಗಾವಿ ಮಾರ್ಗದಲ್ಲಿ ಇಬ್ಬರು ಆರೋಪಿಗಳು ಅರೆಸ್ಟ್

 

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಸರಳವಾಸ್ತು ಖ್ಯಾತಿಯ, ಖ್ಯಾತ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ನಾಲ್ಕೇ ಗಂಟೆಗಳಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಹುಬ್ಬಳ್ಳಿಯ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಚಂದ್ರಶೇಖರ್ ಗುರೂಜಿಯವರನ್ನು ಇಬ್ಬರು ಹಂತಕರು ಬರ್ಬರವಾಗಿ ಹತ್ಯೆ ಮಾಡಿದ್ದರು. ಚಾಕುವಿನಿಂದ ಮನಬಂದಂತೆ ಗುರೂಜಿಯವರನ್ನು ಇರಿದು ಕೊಂದ ಭಯಂಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕೃತ್ಯದ ಬಳಿಕ ಹಂತಕರು ಹೋಟೆಲ್ ನಿಂದ ಪರಾರಿಯಾಗಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆರೋಪಿಗಳಾದ ಮಹಾಂತೇಶ್ ಹಾಗೂ ಮಂಜುನಾಥ್ ಎಂಬುವವರನ್ನು ಪೊಲಿಸರು ಬಂಧಿಸಿದ್ದು, ನಿಗೂಢ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.

ಘಟನೆ ನಡೆದ ಬೆನಲ್ಲೇ ಆರೋಪಿಗಳಿಗಾಗಿ ಬಲೆ ಬೀಸಿದ್ದ ಪೊಲೀಸರು ಹುಬ್ಬಳ್ಳಿ-ಧಾರವಾಡದಾದ್ಯಂತ ನಾಕಾಬಂಧಿ ಹಾಕಿದ್ದರು. ಇದೀಗ ಹುಬ್ಬಳ್ಳಿ ಹಾಗೂ ಬೆಳಗಾವಿ ಮಾರ್ಗ ಮಧ್ಯೆ ಹಂತಕರನ್ನು ಪೊಲೀಸರು ಬಂಧಿಸಿದ್ದಾರೆ.

ಚಂದ್ರಶೇಖರ್ ಗುರೂಜಿ ಹತ್ಯೆ ಕೇಸ್; ಆಪ್ತ ಮಹಾಂತೇಶ್ ಪತ್ನಿ ವನಜಾಕ್ಷಿ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button