*ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿಮನಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರಶೇಖರ್ ಸಿದ್ದಿ ಝೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಮೂಲಕ ಜನಪ್ರಿಯತೆ ಪಡೆದಿದ್ದರು. ನಿನಾಸಂ ನಾಟಕ ತರಬೇತಿ ಪಡೆದಿದ್ದ ಚಂದ್ರಶೇಖರ್ ಸಿದ್ದಿ ಯೋಗಪಟು ಕೂಡ ಆಗಿದ್ದರು. ಕಾಮಿಡಿ ಕಿಲಾಡಿಗಳು ಶೋ … Continue reading *ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮಹತ್ಯೆ*