
ಪ್ರಗತಿವಾಹಿನಿ ಸುದ್ದಿ: ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂಬ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಸೈಯ್ಯದ್ ಅಬ್ಬಾಸ್ ಎಂಬುವವರು ಸ್ವಾಮೀಜಿ ವಿರುದ್ಧ ದೂರು ನಿಡಿದ್ದು, ಬಿಎನ್ ಎಸ್ ಸೆಕ್ಷನ್ 299 ಅಡಿ ಉಪ್ಪರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಬೆಂಗಖೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸಮಾವೇಶದಲ್ಲಿ ಚಂದ್ರಶೇಖರ ಸ್ವಾಮೀಜಿ, ಮುಸ್ಲಿಮರಿಗೆ ಮತದಾನದ ಹಕ್ಕು ರದ್ದು ಮಾಡಬೇಕು ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆ ತೀವ್ರ ಚರ್ಚೆ, ವಿವಾದಕ್ಕೆ ಕಾರಣವಗುತ್ತಿದ್ದಂತೆ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದ್ದರು. ಆದಾಗ್ಯೂ ಈಗ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ