ಚಂದ್ರಯಾನ ಯಶಸ್ವಿ: ಸುವರ್ಣಾಕ್ಷರಗಳಲ್ಲಿ ಬರೆಯುವ ಕ್ಷಣ – ಜೊಲ್ಲೆ ದಂಪತಿ
ಪ್ರಗತಿವಾಹಿನಿ ಸುದ್ದಿ, ಚಿಕ್ಕೋಡಿ: ಚಂದ್ರಯಾನ -3 ಲ್ಯಾಂಡರ್ ಚಂದ್ರನ ದಕ್ಷಿಣ ದ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂದು ಹೇಳಲು ಹೆಮ್ಮೆ ಆಗುತ್ತಿದೆ. ಎಂದು ಮಾಜಿ ಸಚಿವೆ ಹಾಗೂ ನಿಪ್ಪಾಣಿ ಶಾಸಕರಾದ ಶಶಿಕಲಾ ಜೊಲ್ಲೆ ಅವರು ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಜಿ ಅವರ ಆಡಳಿತದಲ್ಲಿ ಭಾರತ ಇಂತಹ ವಿಶ್ವ ದಾಖಲೆಯ ಮಾಡಿದ್ದು ಶ್ಲಾಘನೀಯ. ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿ ಭಾರತ ಇತಿಹಾಸ ಬರೆದಿದೆ. ಈ ಮೂಲಕ ಚಂದ್ರನ ಮೇಲೆ ಲ್ಯಾಂಡರ್ ಇಳಿಸಿದ 4 ಗಣ್ಯ ರಾಷ್ಟ್ರಗಳ ಸಾಲಿಗೆ ಭಾರತ ಕೂಡ ಸೇರ್ಪಡೆ ಆಗಿದೆ. ಚಂದ್ರಯಾನ ಯಶಸ್ವಿ ಆಗಿರುವುದಕ್ಕೆ ಅತ್ಯಂತ ಸಂತೋಷವಾಗಿದೆ. ಇಡೀ ದೇಶವೇ ಸಂತಸ ಪಡುವಂತಹ ಈ ಅಭೂತಪೂರ್ವ ಸಾಧನೆಗಾಗಿ ಸಂಪೂರ್ಣ ವಿಜ್ಞಾನಿಗಳ ತಂಡವನ್ನು ಅಭಿನಂದಿಸುತ್ತೇನೆ ಎಂದು ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.
*ಚಂದ್ರಯಾನ ಯಶಸ್ವಿ ಭಾರತದ ಸಾಧನೆಗೆ ವಿಶ್ವವೇ ಬೆರಗು:ಸಂಸದ ಅಣ್ಣಾಸಾಹೇಬ ಜೊಲ್ಲೆ.*
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಚಂದ್ರಯಾನ-3 ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತ ಚಂದ್ರನ ದಕ್ಷಿಣ ದ್ರುವವನ್ನು ತಲುಪಿದ ಮೊದಲ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವುದು ಸಮಸ್ತ ಭಾರತೀಯರಿಗೆ ಹೆಮ್ಮೆ ತಂದಿದೆ. ಈ ಐತಿಹಾಸಿಕ ಸಾಧನೆಗೈದಿರುವ ಇಸ್ರೋ ವಿಜ್ಞಾನಿಗಳ ಇಡೀ ತಂಡಕ್ಕೆ ಹಾರ್ದಿಕ ಅಭಿನಂದನೆಗಳು. ಪ್ರಧಾನಿ ನರೇಂದ್ರ ಮೋದಿಯವರ ಆಡಳಿತಾವಧಿಯಲ್ಲಿ ಭಾರತ ಇಂತಹ ವಿಶ್ವ ದಾಖಲೆಯ ಸಾಧನೆಯ ಹೊಸ ಮೈಲಿಗಲ್ಲು ತಲುಪಿರುವುದು ಶ್ಲಾಘನೀಯ. ಈ ಅದ್ವಿತೀಯ ಸಾಧನೆಯ ಮೂಲಕ ವಿಶ್ವವೇ ಬೆರಗಾಗಿ ಭಾರತದತ್ತ ತಿರುಗಿ ನೋಡುವಂತೆ ಮಾಡಿರುವ ಇಸ್ರೋ ವಿಜ್ಞಾನಿಗಳ ವಿಕ್ರಮ ಸಾಧನೆ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಕ್ಷಣವಾಗಿದೆ ಎಂದು ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ