ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಚಂದ್ರಯಾನ-3 ಯಶಸ್ಸಿನ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ-ಇಸ್ರೋ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದು, ಸೂರ್ಯ ಯಾನಕ್ಕೆ ಸಜ್ಜಾಗಿದೆ. ಈ ನಿಟ್ಟಿನಲ್ಲಿ ಆದಿತ್ಯ ಎಲ್-1 ಮಿಷನ್ ಉಡಾವಣೆಗೆ ಮುಹೂರ್ತ ನಿಗದಿ ಮಾಡಿದೆ.
ಭಾರತದ ಚಂದ್ರಯಾನ ಯಶಸ್ವಿಯಾಗಿದ್ದು, ವಿಕ್ರಮ್ ಲ್ಯಾಂಡರ್ ಮೂಲಕ ಚಂದ್ರನ ಅಂಗಳದಲ್ಲಿ ಇಳಿದಿರುವ ಪ್ರಜ್ಞಾನ್ ರೋವರ್ ಚಂದ್ರನಲ್ಲಿ ಸಂಶೋಧನೆ ಆರಂಭಿಸಿದೆ. ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ಪ್ರಪಂಚವೆ ಶ್ಲಾಘಿಸುತ್ತಿದೆ. ಇದೇ ಸಂದರ್ಭದಲ್ಲಿ ಇಸ್ರೋ ವಿಜ್ಞಾನಿಗಳು ಸೂರ್ಯ ಯಾನ ಕೈಗೊಳ್ಳುವ ಬಗ್ಗೆ ಘೋಷಣೆ ಮಾಡಿದ್ದು, ಅದಕ್ಕಾಗಿ ದಿನಾಂಕ ನಿಗದಿ ಮಾಡಿದ್ದಾರೆ.
ಸೆಪ್ಟೆಂಬರ್ 2ರಂದು ಬೆಳಿಗ್ಗೆ 11:50ಕ್ಕೆ ಸೂರ್ಯ ಯಾನದ ಆದಿತ್ಯ ಎಲ್ -1 ಮಿಷನ್ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಗೊಳ್ಳಲಿದೆ. ಈ ಮೂಲಕ ಸೂರ್ಯನಲ್ಲಿ ಸಂಶೋಧನೆಗೆ ಇಸ್ರೋ ಮುಂದಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ