Kannada NewsLatest

*ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ*

ಪ್ರಗತಿವಾಹಿನಿ ಸುದ್ದಿ;ಶ್ರೀಹರಿಕೋಟಾ : ಇಂದು ಇಸ್ರೋ ಮತ್ತೊಂದು ಇತಿಹಾಸ ನಿರ್ಮಾಣಕ್ಕೆ ಸಜ್ಜಾಗಿದೆ. ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ ಆರಂಭವಾಗಿದೆ.

ಇಡೀ ಜಗತ್ತು ಕೌತುಕದಿಂದ ಕಾಯುತ್ತಿರುವ ಚಂದ್ರಯಾನ-3 ನೌಕೆ ಇಂದು ಮಧ್ಯಾಹ್ನ2:30ರ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಲಿದೆ.

ಲ್ಯಾಂಡ್ ರೋವರ್ ಗಳನ್ನು ಹೊತ್ತುಕೊಂಡು ಎಲ್ ವಿಎಂ-3 ರಾಕೇಟ್ ಶ್ರೀಹರಿಕೋಟಾದ ಉಡಾವಣಾ ಪ್ಯಾಡ್ ಮೇಲೆ ನಿಂತು ನಭಕ್ಕೆ ಜಿಗಿಯಲು ಸಜ್ಜಾಗಿದೆ. ಈ ಐತಿಹಾಸಿಕ ಕ್ಷಣ ಕಣ್ತುಂಬಿಕೊಳ್ಳಲು ಭಾರತೀಯರು ಕಾತರದಿಂದ ಕಾಯುತ್ತಿದ್ದಾರೆ. ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಲಾಂಚ್ ವೆಹಿಕಲ್ ಮಾರ್ಕ್-111 ಮೂಲಕ ಉಡಾವಣೆ ಮಾಡಲಾಗುತ್ತಿದೆ.

ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದರೆ ಅಮೆರಿಕ, ರಷ್ಯಾ, ಚೀನಾ ನಂತರ ಭಾರತ ನಾಲ್ಕನೇ ರಾಷ್ಟ್ರವಾಗಲಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button