ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ -ಇಸ್ರೋ ಮತ್ತೊಂದು ಇತಿಹಾಸ ನಿರ್ಮಿಸಿದ್ದು, ಮಹತ್ವಾಕಾಂಕ್ಷಿ ಚಂದ್ರಯಾನ-3 ನೌಕೆ ಯಶಸ್ವಿ ಉಡಾವಣೆಗೊಂಡಿದೆ.
ಇಡೀ ಜಗತ್ತು ಕೌತುಕದಿಂದ ಕಾಯುತ್ತಿರುವ ಚಂದ್ರಯಾನ-3 ನೌಕೆ ಇಂದು ಮಧ್ಯಾಹ್ನ2:35ರ ಸುಮಾರಿಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ನಭಕ್ಕೆ ಚಿಮ್ಮಿತು. ಮೊದಲ ಹಂತ ಯಶಸ್ವಿಯಾಗಿ ದಾಟಿ ನಿಗದಿತ ಮಾರ್ಗದಲ್ಲಿ ಸಂಚರಿಸುತ್ತಿದೆ ಎಂದು ತಿಳಿದುಬಂದಿದೆ.
ಲ್ಯಾಂಡ್ ರೋವರ್ ಗಳನ್ನು ಹೊತ್ತುಕೊಂಡು GSLV-MK 3 ರಾಕೇಟ್ ಒಳಗೊಂಡ ಚಂದ್ರಯಾನ-3ನೌಕೆ ಚಂದ್ರನಂಗಳದತ್ತ ಯಶಸ್ವಿಯಾಗಿ ತೆರಳುತ್ತಿದೆ. ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿಯಾದರೆ ಅಮೆರಿಕ, ರಷ್ಯಾ, ಚೀನಾ ನಂತರ ಭಾರತ ನಾಲ್ಕನೇ ರಾಷ್ಟ್ರವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ