Kannada NewsKarnataka NewsLatest

*ಚಂದ್ರಯಾನ-3 ಯಶಸ್ವಿ ಉಡಾವಣೆ; ಭಾರತಕ್ಕೆ ಹೆಮ್ಮೆಯ ಕ್ಷಣ…ಇಸ್ರೋ ವಿಜ್ಞಾನಿಗಳಿಗೆ ಸಿಎಂ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ-ಇಸ್ರೋ ಮಹತ್ವಾಕಾಂಕ್ಷಿ ಚಂದ್ರಯಾನ-3 ಯಶಸ್ವಿ ಉಡಾವಣೆ ಮಾಡಿದೆ. ಭಾರತೀಯ ಬಾಹ್ಯಾಕಾಶ ವಲಯದಲ್ಲಿ ಸಂಭ್ರಮ ಮನೆ ಮಾಡಿದೆ. ಇಸ್ರೋ ವಿಜ್ಞಾನಿಗಳಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಚಂದ್ರಯಾನ-3 ಯಶಸ್ವಿ ಉಡಾವಣೆ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂಧನೆ ಸಲ್ಲಿಸಿರುವ ಸಿಎಂ ಸಿದ್ದರಾಮಯ್ಯ, ಇದು ಭಾರತಕ್ಕೆ ಹೆಮ್ಮೆಯ ಕ್ಷಣ ಹಾಗೂ ಭಾರತದ ಬಾಹ್ಯಾಕಾಶ ಸಂಶೋಧನೆ ಮತ್ತು ನಾವೀನ್ಯತೆಯಲ್ಲಿ ಹೊಸ ಮೈಲುಗಲ್ಲಾಗಿದೆ ಎಂದು ತಿಳಿಸಿದ್ದಾರೆ.

ಈ ಸಾಧನೆ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಂಶೋಧನೆ ಕೈಗೊಳ್ಳಲು ಭಾರತದ ಯುವ ಮನಸ್ಸುಗಳನ್ನು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button