Kannada NewsKarnataka NewsLatestNational

*ಚಂದ್ರನ ಮೇಲೆ ಇಳಿದ ಭಾರತ*

ಚಂದ್ರಯಾನ-3 ಯಶಸ್ವಿ; ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಇಳಿದ ವಿಕ್ರಮ್ ಲ್ಯಾಂಡರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಿದೆ. ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನ ಅಂಗಳವನ್ನು ಸ್ಪರ್ಶಿಸಿದೆ.

ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ನಿಗದಿತ ಸಮಯದಲ್ಲಿ ಇಂದು ಸಂಜೆ 6:4ಕ್ಕೆ ಚಂದ್ರನ ದಕ್ಷಿಣ ದ್ರವವನ್ನು ಸ್ಪರ್ಶಿಸಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳ ಹಾಗೂ ಕೋಟ್ಯಂತರ ಭಾರತೀಯರ ಚಂದ್ರಯಾನ ಕನಸು ನನಸಾಗಿದೆ.

ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳವನ್ನು ಸ್ಪರ್ಶಿಸುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು, ದೇಶವಾಸಿಗಳು ಚಪ್ಪಾಳೆ, ಹರ್ಷೋದ್ಗಾರದ ಮೂಲಕ ಸಂಭ್ರಮಿಸಿವೆ. ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆ -ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಭಾರತದ ಹಾಗೂ ಇಸ್ರೋ ವಿಜ್ಞಾನಿಗಳ ಸಾಧನೆಯನ್ನು ಇಡೀ ಪ್ರಪಂಚವೇ ಶ್ಲಾಘಿಸುತ್ತಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button