
ಪ್ರಗತಿವಾಹಿನಿ ಸುದ್ದಿ: ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು ಸೇರಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿಗೆ ಜಾಮೀನು ಮಂಜೂರಾಗಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿರುವ ಶಾಸಕರ ಆಪ್ತ ಮೂಲಕ ಗುತ್ತಿಗೆದಾರರಿಂದ ₹11 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ₹5 ಲಕ್ಷ ಪಡೆಯುವಾಗ ಲೋಕಾಯುಕ್ತ ಪೊಲೀಸರಿಂದ ಬಂಧಿಸಲಾಗಿತ್ತು.




