ಚಂದ್ರು ಕೊಲೆ ಪ್ರಕರಣ ಸಿಐಡಿಗೆ ಹಸ್ತಾಂತರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

 ಪ್ರಗತಿವಾಹಿನಿ ಸುದ್ದಿ,  ಬೆಂಗಳೂರು : ಜೆ.ಜೆ.ನಗರದ ಚಂದ್ರು ಕೊಲೆ ಪ್ರಕರಣದಲ್ಲಿ ಸತ್ಯ ಹೊರ ಬರಬೇಕಿರುವುದು ಮುಖ್ಯ. ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರು ಹಾಗೂ ಪೊಲೀಸ್ ಮಹಾನಿರ್ದೇಶಕರೊಂದಿಗೆ ಮಾತನಾಡಿ, ಸಿ.ಐ.ಡಿ ಗೆ ಪ್ರಕರಣ ಹಸ್ತಾಂತರಿಸಲು ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ನಿವಾದದ ಬಳಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

ಮೂರನೇ ಪಾರ್ಟಿಯಿಂದ ನಿಷ್ಪಕ್ಷಪಾತ ತನಿಖೆ ಆಗಲಿ. ತನಿಖೆಯಾಗಿ ಸತ್ಯ ಹೊರಗೆ ಬರಲಿ ಎಂದರು.

*ಬಿ.ಜೆ.ಪಿ ರಾಜ್ಯ ಪ್ರವಾಸ*
ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡುತ್ತಿದ್ದು, ಬೂತ್ ಮಟ್ಟದ ಹಾಗೂ ಜಿಲ್ಲಾ ಕಾರ್ಯಕರ್ತರ ಸಭೆ ನಡೆಸಲಾಗುವುದು. ಎರಡು ದಿನ ಮೂರು ವಿಭಾಗಗಳಲ್ಲಿ ಮೂರು ತಂಡ ಒಟ್ಟು ಒಂಭತ್ತು ಕಡೆ ಎರಡು ಸಭೆಗಳನ್ನು ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಾಯಕರಾದ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರವಾಸ ಮಾಡಲಾಗುವುದು ಎಂದರು.

ಬಿಜೆಪಿ ಚುನಾವಣೆ ರಣಕಹಳೆ: 12ರಂದು ಬೆಳಗಾವಿಗೆ ಬರಲಿದ್ದಾರೆ ಘಟಾನುಘಟಿ ನಾಯಕರು

ಚಂದ್ರು ಹತ್ಯೆ ಕೇಸ್ ಪ್ರಕರಣ; ಪೊಲೀಸ್ ಆಯುಕ್ತರಿಂದ ಸುಳ್ಳು ಹೇಳಿಕೆ; ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಗಂಭೀರ ಆರೋಪ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button