Belagavi NewsBelgaum NewsElection NewsKannada NewsKarnataka NewsNationalPolitics

ಪ್ರಧಾನಿ ಮೋದಿ ಪ್ರವಾಸದಲ್ಲಿ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿಯವರ ಪ್ರವಾಸದಲ್ಲಿ ಬದಲಾವಣೆ ಆಗಿದೆ. ಏ. 28 ರ ಬದಲಾಗಿ 27 ರಂದೆ ಬೆಳಗಾವಿಗೆ ಆಗಮಿಸಿ, ವಾಸ್ತವ್ಯ ಹೂಡಲಿದ್ದಾರೆ ಎಂದು ಬೆಳಗಾವಿ ಬಿಜೆಪಿ ಗ್ರಾಮೀಣ ಜಿಲ್ಲಾದ್ಯಕ್ಷ ಸುಭಾಷ್ ಪಾಟೀಲ್ ಹೇಳಿದ್ದಾರೆ.

ಬಿಜೆಪಿ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಮೋದಿಯವರ ಕಾರ್ಯಕ್ರಮದಲ್ಲಿ ಬದಲಾವಣೆಯಾಗಿದೆ. ಏ. 28 ರಂದು ಬೆಳಗ್ಗೆ 12 ಗಂಟೆಗೆ ವೇದಿಕೆ ಕಾರ್ಯಕ್ರಮ ಆಗಬೇಕಿದ್ದ ವೇದಿಕೆ ಕಾರ್ಯಕ್ರಮ 28 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ.‌ ಮಹಾರಾಷ್ಟ್ರದಿಂದ ರಸ್ತೆ ಮೂಲಕ ಬೆಳಗಾವಿಗೆ ಏ. 27 ರಂದು ಬಂದು, ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ಮೋದಿ ವಾಸ್ತವ್ಯ ಹೂಡಲಿದ್ದಾರೆ ಎಂದು ತಿಳಿಸಿದರು.‌

Home add -Advt

ಮಾಜಿ ಪ್ರಧಾನಿ ದೇವಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

Related Articles

Back to top button