Kannada NewsKarnataka NewsLatest

ಯಡಿಯೂರಪ್ಪ ಬೆಳಗಾವಿ ಕಾರ್ಯಕ್ರಮದಲ್ಲಿ ಬದಲಾವಣೆ

ಮಂಗಳವಾರ ಬೆಳಗಾವಿಯಲ್ಲೇ ವಾಸ್ತವ್ಯ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬೆಳಗಾವಿಗೆ ಆಗಮಿಸಲಿದ್ದಾರೆ.

ಮಧ್ಯಾಹ್ನ 1.15ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ಯಡಿಯೂರಪ್ಪ ನಂತರ ಬೆಳಗಾವಿ ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಡಿಯೂರಪ್ಪ ಅವರ ಈ ಮೊದಲಿನ ಕಾರ್ಯಕ್ರಮದಂತೆ ನಾಳೆ ಸಂಜೆಯೇ ಅವರು ಬೆಂಗಳೂರಿಗೆ ವಾಪಸ್ಸಾಗುವವರಿದ್ದರು. ಆದರೆ ಇದೀಗ ಪರಿಷ್ಕೃತ ಪ್ರವಾಸ ಪಟ್ಟಿ ಬಿಡುಗಡೆಯಾಗಿದ್ದು, ನಾಳೆ ರಾತ್ರಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಬುಧವಾರ ಬೆಳಗ್ಗೆ 8.55ಕ್ಕೆ ಅವರು ಬೆಳಗಾವಿಯಿಂದ ಬೆಂಗಳೂರಿಗೆ ತೆರಳುವರು.

ಈ ಮೊದಲಿನ ಸುದ್ದಿ –  ನಾಳೆ ಬೆಳಗಾವಿಗೆ ಯಡಿಯೂರಪ್ಪ

ಲೋಕಸಭಾ ಉಪ ಚುನಾವಣೆ: ಇಂದು 9 ನಾಮಪತ್ರಗಳ ಸಲ್ಲಿಕೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button