Kannada NewsKarnataka NewsLatestPolitics

*ಮುಖ್ಯಮಂತ್ರಿ ಬದಲಾವಣೆ: ವೇಣುಗೋಪಾಲ ಖಡಕ್ ಪ್ರತಿಕ್ರಿಯೆ*

*ಶ್ರಮಜೀವಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಶ್ರಾಂತಿ ಪಡೆಯಲು ಮನವಿ ಮಾಡಿದ್ದೇನೆ: ಕೆ.ಸಿ. ವೇಣುಗೋಪಾಲ್*

*ಖರ್ಗೆ ಅವರ ಆರೋಗ್ಯ ಸುಧಾರಿಸುತ್ತಿದೆ*

Home add -Advt

*ಅಗತ್ಯ ಬಿದ್ದಾಗ ತೀರ್ಮಾನ ಮಾಡುವ ಶಕ್ತಿ ಪಕ್ಷಕ್ಕಿದೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು :* “ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸುಧಾರಿಸುತ್ತಿದೆ. ಶ್ರಮಜೀವಿಯಾದ ಅವರು ವಿಶ್ರಾಂತಿ ಪಡೆಯಲು ಮನವಿ ಮಾಡಿದ್ದೇವೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಿದ ಬಳಿಕ ವೇಣುಗೋಪಾಲ್ ಅವರು ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. 

“ಆರೋಗ್ಯ ಸಮಸ್ಯೆಯಿಂದ ಚಿಕಿತ್ಸೆ ಪಡೆದಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ವಿಚಾರಿಸಲು ಭೇಟಿಯಾಗಿದ್ದೇವು. ಈಗ ಅವರ ಆರೋಗ್ಯ ಸುಧಾರಿಸುತ್ತಿದೆ. ನಮ್ಮ ಅಧ್ಯಕ್ಷರು ಶ್ರಮಜೀವಿ. ದಿನದ 24 ತಾಸು ಕೂಡ ಪಕ್ಷಕ್ಕಾಗಿ ದುಡಿಯುತ್ತಾರೆ. ಎಲ್ಲೇ ಅವರ ಉಪಸ್ಥಿತಿ ಬಯಸಿದರೂ ಅವರು ಪಕ್ಷದ ಕಾರ್ಯಕ್ರಮಗಳಿಗೆ ತೆರಳುತ್ತಿದ್ದರು. ಅದು ಈಶಾನ್ಯ ರಾಜ್ಯಗಳಾಗಲಿ, ಯಾವುದೇ ಮೂಲೆ ಇದ್ದರೂ ಅವರು ತೆರಳುತ್ತಿದ್ದರು” ಎಂದರು.

“ಅವರು ಮತ್ತೆ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಳ್ಳಲು ಉತ್ಸುಕರಾಗಿದ್ದು, ಆರೋಗ್ಯ ಗಮನಿಸಿಕೊಂಡು ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳುವಂತೆ ನಾವು ಮನವಿ ಮಾಡಿದ್ದೇವೆ. ಸೋನಿಯಾ ಗಾಂಧಿ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರತಿನಿತ್ಯ ಖರ್ಗೆ ಅವರ ಸಂಪರ್ಕದಲ್ಲಿ ಇದ್ದಾರೆ. ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ” ಎಂದು ತಿಳಿಸಿದರು.

*ಅಗತ್ಯ ಬಿದ್ದಾಗ ಪಕ್ಷ ಸೂಕ್ತ ತೀರ್ಮಾನ ಮಾಡಲಿದೆ:*

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಐದು ವರ್ಷ ಸಿಎಂ ಆಗಿರುವುದಾಗಿ ತಿಳಿಸಿದ್ದಾರೆ ಎಂದು ಕೇಳಿದಾಗ, “ನಾನು ಪ್ರತಿ ಬಾರಿ ಕರ್ನಾಟಕಕ್ಕೆ ಬಂದಾಗಲೂ ಇದೇ ಪ್ರಶ್ನೆ, ಇದೇ ಅಜೆಂಡಾ ಇರುತ್ತದೆ. ನಮ್ಮ ಪಕ್ಷದಲ್ಲಿ ಏನಾಗಬೇಕು ಎಂಬ ತೀರ್ಮಾನ ಮಾಡುವ ಸಾಮರ್ಥ್ಯ ಕಾಂಗ್ರೆಸ್ ಪಕ್ಷಕ್ಕೆ ಇದೆ. ಈ ತೀರ್ಮಾನ ಮಾಡುವ ಅಧಿಕಾರವನ್ನು ನಮಗೆ ಬಿಡಿ. ಅಗತ್ಯ ಬಿದ್ದಾಗ ಪಕ್ಷ ತೀರ್ಮಾನ ಮಾಡಲಿದೆ” ಎಂದು ತಿಳಿಸಿದರು.

Related Articles

Back to top button