
ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್ ನಮಗೆ ದೇಗುಲವಿದ್ದಂತೆ. ದೇಗುಲದಂತಿರುವ ಹೈಕಮಾಂಡ್ ಬಳಿ ಕೆಪಿಸಿಸಿ ಅಧ್ಯಕ್ಷ ಹುದ್ದೆಯಿಂದ ಡಿಸಿಎಂ ಡಿ.ಕೆ. ಶಿವಕುಮಾರ ಬದಲಾವಣೆಗೆ ನಮ್ಮ ಹಠವಿಲ್ಲ. ನಮ್ಮದು ಏನೇಯಿದ್ರೂ ರಿಕ್ವೆಸ್ಟ್ ಅಷ್ಟೆ ಎಂದು ಲೋಕೋಪಯೋಗಿ ಸಚಿವ ಸತೀಸ್ ಜಾರಕಿಹೊಳಿ ಹೇಳಿದರು.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಬದಲಾವಣೆಯನ್ನು ಹೈಕಮಾಂಡ್ ನಿರ್ಧರಿಸುತ್ತದೆ ಹೊರತು ನಾವಲ್ಲ ಎಂದ ಅವರು, ಕೆಪಿಸಿಸಿ ಅಧ್ಯಕ್ಷ ಹುದ್ದೆಯನ್ನು ನಾನು ಕೇಳಿಯೂ ಇಲ್ಲ, ಆ ಬಗ್ಗೆ ವರಿಷ್ಠರು ನಿರ್ಧಾರ ಮಾಡುತ್ತಾರೆ. ಈ ಐದು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 2028ಕ್ಕೆ ಮತ್ತೆ ಪಕ್ಷ ಅಧಿಕಾರ ಹಿಡಿಯಬೇಕೆಂಬ ಉದ್ದೇಶ ನಮ್ಮದಿದೆ ಎಂದರು.
ಸಿದ್ದರಾಮಯ್ಯ ಪೂರ್ಣ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆಯೇ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ವಿಚಾರದ ಬಗ್ಗೆ ಅವರನ್ನೇ ಕೇಳಬೇಕು. ಅವರನ್ನು ನಾನು ಮುಖ್ಯಮಂತ್ರಿ ಮಾಡಿದ್ದೇನೆಯೇ? ನನ್ನ ವ್ಯಾಪ್ತಿ ಬಿಟ್ಟು ಏನನ್ನೂ ಮಾತನಾಡುವುದಿಲ್ಲ. ಸಿದ್ದರಾಮಯ್ಯ ಮಾತನಾಡಿದ ಮೇಲೆ ನಾನೇನು ಮಾತನಾಡುವುದಿದೆ? ಅವರು ಹೇಳಿದ್ದನ್ನು ನಾನೂ ಪತ್ರಿಕೆಯಲ್ಲಿ ಓದಿದ್ದೇನೆ ಅಷ್ಟೆ. ದಲಿತರ ಸಮಾವೇಶ ಆಯೋಜನೆ ಕುರಿತು ಸಚಿವ ರಾಜಣ್ಣ ದೆಹಲಿಯಲ್ಲಿ ಹೇಳಿದ್ದಾರೆ. ಆ ಬಗ್ಗೆ ಚರ್ಚಿಸಿ ಮಾತನಾಡುವೆ’ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ