Belagavi NewsBelgaum NewsKannada NewsKarnataka NewsLatest

*ಮುಖ್ಯಮಂತ್ರಿಗಳ ಬೆಳಗಾವಿ ಪ್ರವಾಸದಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಗುರುವಾರ (ಜುಲೈ 9) ಬೆಳಗಾವಿಗೆ ಆಗಮಿಸುತ್ತಿರುವ ಡಿ.ಕೆ.ಶಿವಕುಮಾರ ಅಂದು ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ.

ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಡಲಿರುವ ಅವರು 10.40ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. 11 ಗಂಟೆಗೆ ಸುವರ್ಣ ವಿಧಾನಸೌಧ ತಲುಪಿ ಬೆಳಗಾವಿ ವಿಭಾಗ ಮಟ್ಟದ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಸುವರ್ಣ ವಿಧಾನಸೌಧದಲ್ಲಿ ಸೌಥ ಇಂಡಿಯನ್ ಶುಗರ್ ಮಿಲ್ಸ್ ಅಸೋಸಿಯೇಶನ್ ಪ್ರತಿನಿಧಿಗಳೊಂದಿಗೆ ಸಭೆ ನಡೆಸುವರು.

ಸಂಜೆ 6 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

ರಾತ್ರಿ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿಗಳು, ಶುಕ್ರವಾರ ಬೆಳಗ್ಗೆ 9.30ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳಲಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button