Kannada NewsKarnataka NewsLatest

ಮುಖ್ಯಮಂತ್ರಿಗಳ ಪ್ರವಾಸ ಪಟ್ಟಿಯಲ್ಲಿ ಬದಲಾವಣೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಧಾನ ಪರಿಷತ್ತಿನ ವಾಯವ್ಯ ಶಿಕ್ಷಕರ ಹಾಗೂ ವಾಯವ್ಯ ಪದವೀದರ ಕ್ಷೇತ್ರದ ಚುನಾವಣೆ ಪ್ರಚಾರ ನಿಮಿತ್ತ ನಡೆಯಲಿರುವ ಸಭೆಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.

ಮುಖ್ಯಮಂತ್ರಿಗಳ ಹೊಸ ಪ್ರವಾಸ ಪಟ್ಟಿ

ಆದರೆ, ಮುಖ್ಯಮಂತ್ರಿಗಳ ಪ್ರವಾಸ ಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ಮೊದಲು ಬಿಡುಗಡೆ ಮಾಡಲಾದ ಪ್ರವಾಸ ಪಟ್ಟಿಯಲ್ಲಿ ಮುಖ್ಯಮಂತ್ರಿಗಳು ಇಡೀ ದಿನ ಬೆಳಗಾವಿಯಲ್ಲಿರುವುದಿತ್ತು. ಆದರೆ ಈಗ ಬದಲಾವಣೆಯಾಗಿದ್ದು, ಅವರು ಹುಬ್ಬಳ್ಳಿಯಿಂದ ಬೆಳಗಾವಿಗೆ ಆಗಮಿಸಿ, ಸಭೆ ಮುಗಿಸಿ ಮತ್ತೆ ಧಾರವಾಡಕ್ಕೆ ತೆರಳಿ ಅಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ ಭಾಗವಹಿಸಿ ಮತ್ತೆ ಬೆಳಗಾವಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು.

ಅವರು ಹೊಸ ಪ್ರವಾಸ ಪಟ್ಟಿ ಪ್ರಕಾರ, ಬೆಳಗ್ಗೆ 6.15ರ ವಿಮಾನದ ಮೂಲಕ ಬೆಂಗಳೂರಿನಿಂದ ಹೊರಟು, ಹುಬ್ಬಳ್ಳಿಗೆ ಆಗಮಿಸಿ ಅಲ್ಲಿಂದ 9.15ಕ್ಕೇ ಬೆಳಗಾವಿಗೆ ಬರಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಧಾರವಾಡಕ್ಕೆ ತೆರಳುವರು. ಅಲ್ಲಿ ಸಭೆ ಮುಗಿಸಿ 6.10ಕ್ಕೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.

 

ಈ ಮೊದಲು ನಿಗದಿಯಾಗಿದ್ದ ಪ್ರವಾಸದ ವಿವರ ಹೀಗಿತ್ತು –

ಶನಿವಾರ ಬೆಳಗಾವಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

ರಾಜ್ಯದಲ್ಲಿ ಶಾಂತಿ ಕಾಪಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button